×
Ad

ದೇಶದ ಅತ್ಯಂತ ಉದ್ದದ ಸಮುದ್ರ ಸೇತುವೆ ನಿರ್ಮಾಣಕ್ಕೆ ಮೋದಿ ಚಾಲನೆ

Update: 2016-12-25 09:13 IST

ಮುಂಬೈ, ಡಿ.25: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತ್ಯಂತ ಉದ್ದದ ಸಮುದ್ರ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿರುವುದೂ ಸೇರಿದಂತೆ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಎರಡು ಮೆಟ್ರೊ ಲೈನ್‌ಗಳ ನಡುವಿನ ಈ ಸೇತುವೆ ಸುಮಾರು 1.06 ಲಕ್ಷ ಕೋಟಿ ಬಂಡವಾಳ ನಿರೀಕ್ಷಿಸಿದೆ. ಸುಮಾರು 1.06 ದಶಸಹಸ್ರ ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಒಂದೇ ನಗರದಲ್ಲಿ ಚಾಲನೆ ನೀಡಲಾಗಿದೆ. ಇದು ಇತಿಹಾಸದ ಮೈಲುಗಲ್ಲು" ಎಂದು ಮೋದಿ ಸಾರ್ವಜನಿಕ ಸಭೆಯಲ್ಲಿ ಘೋಷಿಸಿದರು. ಬಹಳಷ್ಟು ವಿಳಂಬವಾದ ಮಹತ್ವಾಕಾಂಕ್ಷಿ ಯೋಜನೆಗೆ ಇದೀಗ ಚಾಲನೆ ನೀಡಲಾಗಿದೆ. ಕೆಲವೇ ತಿಂಗಳಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ ಎನ್ನುವುದು ಗಮನಾರ್ಹ ಅಂಶ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News