×
Ad

'ಪದ್ಮಾವತಿ’ ಸೆಟ್‌ನಲ್ಲಿ ಅಪಘಾತ

Update: 2016-12-25 12:34 IST

ಮುಂಬೈ, ಡಿ.25: ಸಂಜಯ್ ಲೀಲಾ ಬನ್ಸಾಲಿ ನಿರ್ಮಾಣ ಹಾಗೂ ನಿರ್ದೇಶನದ ‘ಪದ್ಮಾವತಿ’ ಚಿತ್ರದ ಸೆಟ್‌ನಲ್ಲಿ ನಡೆದ ದುರಂತದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ.

ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ತಾರಾಗಣದ ಚಿತ್ರದ ಸೆಟ್‌ನಲ್ಲಿ ಸುರಕ್ಷಾ ನಿಯಮಗಳನ್ನು ನಿರ್ಲಕ್ಷಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಕಾರ್ಮಿಕನನ್ನು 34ರ ಪ್ರಾಯದ ಮುಕೇಶ್ ದಾಕಿಯಾ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಪೈಂಟರ್ ಆಗಿದ್ದು, ಫಿಲ್ಮ್ ಸಿಟಿಯಲ್ಲಿ ಸೆಟ್ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮುಕೇಶ್ ಪೈಟಿಂಗ್ ಮಾಡುತ್ತಿದ್ದಾಗ 5 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾನೆ. ಆತನನ್ನು ಪ್ರತಿಷ್ಠಿತ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆರೆ ಕಾಲೊನಿ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಮಂದುವರಿದಿದೆ.

ನಿರ್ಮಾಪಕ ಬನ್ಸಾಲಿ ಅವರು ಚಿತ್ರದ ಸೆಟ್‌ನಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿರುವುದಕ್ಕೆ ದುಃಖವ್ಯಕ್ತಪಡಿಸಿದ್ದು, ಆತನ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News