×
Ad

ಪಾತೂರು: ಪುನಃ ಪ್ರತಿಷ್ಠಾಬಂಧ ಬ್ರಹ್ಮಕಲೋಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2016-12-25 17:34 IST

 ಕೊಣಾಜೆ, ಡಿ.25 : ಬಾಕ್ರಬೈಲು ಪಾತೂರಿನ ಶ್ರೀ ಸೂರ್ಯೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾಬಂಧ ಬ್ರಹ್ಮಕಲೋಶೋತ್ಸವವು 2017ರ ಫೆ. 5ರಿಂದ 15ರ ವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಭಾನುವಾರ ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಡಾ.ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು ದೇವಸ್ಥಾನದ ಜೀರ್ಣೋದ್ದಾರದ ಕಾರ್ಯಗಳಲ್ಲಿ ಸೇವೆ ಸಲ್ಲಿಸುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ. ಅವಕಾಶ ದೊರೆತರೆ ಅದೊಂದು ಪುಣ್ಯದ ಕೆಲಸವಾಗಿದ್ದು ನಾವು ಸಕ್ರೀಯವಾಗಿ ಇಂತಹ ಚಟುವಟಿಕೆಗಳಲ್ಲಿ ಸ್ವಯಂ ಮನಸ್ಸಿನಿಂದ ಹಾಗೂ ಭಕ್ತಿಯಿಂದ ಭಾಗವಹಿಸಬೇಕು ಎಂದರು.

ನಾನು ಎಂಬ ಭಾವ ಮನುಷ್ಯರನ್ನು ಉತ್ತಮತೆಯೆಡೆಗೆ ಕೊಂಡೊಯ್ಯಲು ಸಾಧ್ಯವಿಲ್ಲ. ಆದ್ದರಿಂದ ನಾನು ಎಂಬ ಭಾವವನ್ನು ದೂರಗೊಳಿಸಿ ನಾವು ಎಂಬ ಮನೋಭಾವನೆಯನ್ನು ಬೆಳೆಸಿಕೊಂಡರೆ ಸಮಾಜದ ಅಭಿವೃದ್ಧಿ ಖಂಡಿತಾ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮಲಾರಬೀಡು ರವೀಂದ್ರನಾಥ ಆಳ್ವ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ದೇವಾಲಯದ ಜೀರ್ಣೋದ್ದಾರದ ಬಗ್ಗೆ ಈ ಊರಿನ ಜನರ ಹಲವಾರು ವರ್ಷದ ಕನಸಾಗಿತ್ತು. ಇದೀಗ ನನಸಾಗುತ್ತಿದ್ದು ಊರಿನ ಜನರು ಒಗ್ಗಟ್ಟಾಗಿ ದೇವಲ ಜೀರ್ಣೊದ್ದಾರೆ ಕೆಲಸಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಡೇಕಳ ಶಂಕರ್‌ಮೋಹನ್ ಪೂಂಜ, ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ, ಡಾ.ಶ್ರೀಧರ ಭಟ್, ಕೋಚಣ್ಣ ಶೆಟ್ಟಿ ಬಾಳೆಪುಣಿ ಗುತ್ತು, ಬಾಲಕೃಷ್ಣ ಶೆಟ್ಟಿ, ಮಂಜುನಾಥ ಶೆಟ್ಟಿ, ಶಂಕರ ರೈ, ವರದಾಜ್ ರೈ, ಶ್ರೀಧರ ಪೂಜಾರಿ, ಕೃಷ್ಣ ಭಟ್, ವಸಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಬ್ರಹ್ಕಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿದ್ಯಾನಂದ ಸಾಮಾಣಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮನಮೋಹನ ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News