×
Ad

ವಿವೇಕಾನಂದ ಕಾಲೇಜ್‌ನಲ್ಲಿ ‘ಯಶಸ್-2017’ ಅರ್ಹತಾ ಪರೀಕ್ಷೆ

Update: 2016-12-25 19:09 IST

ಪುತ್ತೂರು, ಡಿ.25 : ಭಾರತೀಯ ನಾಗರಿಕ ಸೇವಾ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ‘ಯಶಸ್-2017’ ತಂಡದ ಆಯ್ಕೆಗಾಗಿ ನಡೆಸಲಾಗುವ ಅರ್ಹತಾ ಪ್ರವೇಶ ಪರೀಕ್ಷೆಯು ಭಾನುವಾರ ಪುತ್ತೂರಿನ ವಿವೇಕಾನಂದ ಕಾಲೇಜ್‌ನಲ್ಲಿ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ಸುತ್ತಮುತ್ತಲಿನ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಾಗಿದ್ದರು.

ದ.ಕ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ 8 ಕೇಂದ್ರದಲ್ಲಿ ಏಕಕಾಲದಲ್ಲಿ ನಡೆದ ಪರೀಕ್ಷೆಯಲ್ಲಿ 1000ಕ್ಕೂ ಅಧಿಕ ಹತ್ತನೇ ತರಗತಿಯ ವಿದ್ಯಾರ್ಥಿಗಳೂ ಭಾಗವಹಿಸಿದ್ದರು.

ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಗೊಂಡವರಿಗೆ ಮುಂದೆ ಮೌಖಿಕ ಪರೀಕ್ಷೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News