×
Ad

ನೋಟು ರದ್ದತಿ ಒಳ್ಳೆಯ ನಿರ್ಧಾರ: ಪಾರಿಕ್ಕರ್

Update: 2016-12-25 21:21 IST

ಉಡುಪಿ, ಡಿ.25: ನೋಟು ರದ್ದತಿಯು ಪ್ರಧಾನ ಮಂತ್ರಿಯವರ ಬಹಳ ಒಳ್ಳೆಯ ನಿರ್ಣಯವಾಗಿದ್ದು, ಎಲ್ಲರು ಇದನ್ನು ಬೆಂಬಲಿಸಿದ್ದಾರೆ. ಆದರೆ ಇಷ್ಟಪಡದ ಕೆಲವರು ಮಾತ್ರ ಇದನ್ನು ವಿರೋಧಿಸುತ್ತಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಹೇಳಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠಕ್ಕೆ ರವಿವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ನೋಟು ರದ್ದತಿಯಿಂದ ಬಡವರಿಗೆ ತೊಂದರೆಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಸಚಿವರು, ಬಹುಮಂದಿ ಬಡವರು ಈ ನಿರ್ಧಾರವನ್ನು ಪ್ರಶಂಸಿಸಿದ್ದಾರೆ. ಇದರಿಂದ ಸದ್ಯಕ್ಕೆ ಕೆಲವು ತೊಂದರೆಯಾದರೂ ಭವಿಷ್ಯದಲ್ಲಿ ಇದರಿಂದ ಎಲ್ಲರಿಗೂ ಒಳಿತಾಗಲಿದೆ ಎಂದು ಹೇಳಿದರು.

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವರು ಪರ್ಯಾಯ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಉಡುಪಿ ಮಠವು ಭಕ್ತಿಯ ಮಾರ್ಗ ಹಾಗೂ ಗೋಸರಂಕ್ಷಣೆಯ ಬಗ್ಗೆ ಉತ್ತಮವಾದ ಕೆಲಸ ನಿರ್ವಹಿಸುತ್ತಿದೆ. ಇಲ್ಲಿಗೆ ಬರಲು ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದು ಸಚಿವರು ನುಡಿದರು.

ಫೆ.6ರಂದು ನಡೆಯುವ ಮಧ್ವಾಚಾರ್ಯರ ಸಪ್ತ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಒಪ್ಪಿದ್ದಾರೆ ಎಂದು ಪೇಜಾವರ ಶ್ರೀ ತಿಳಿಸಿದರು.

ಪೇಜಾವರ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ದಿವಾನ ಎಂ.ಎಂ.ರಘುರಾಮಾಚಾರ್ಯ, ಆಪ್ತ ಕಾರ್ಯದರ್ಶಿ ವಿಷ್ಣು ಆಚಾರ್ಯ, ಶಶಾಂಕ ಭಟ್, ಮಂಗಳೂರು ಸಂಸದ ನಳಿನ್‌ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News