×
Ad

ಉಡುಪಿ : ವಿತ್ತೀಯ ಸಾಕ್ಷರತಾ ಅಭಿಯಾನ

Update: 2016-12-26 22:55 IST

ಉಡುಪಿ, ಡಿ.26: ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ವಿತ್ತೀಯ ಸಾಕ್ಷರತಾ ಅಭಿಯಾನದ ಅಂಗವಾಗಿ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜ ಕಾರ್ಯ ವಿದ್ಯಾರ್ಥಿಗಳು ತೆಂಕನಿಡಿಯೂರು ಗ್ರಾಪಂ ವ್ಯಾಪ್ತಿಯಲ್ಲಿ ಆಂದೋಲ ನಡೆಸಿದರು.

ರಾಷ್ಟ್ರದಲ್ಲಿ ಕಪ್ಪು ಹಣದ ಬಳಕೆಗೆ ಕಡಿವಾಣ, ಭ್ರಷ್ಟಾಚಾರ ಮುಕ್ತ ಮತ್ತು ಹಣಕಾಸಿನ ವ್ಯವಹಾರದಲ್ಲಿ ಸಂಪೂರ್ಣವಾಗಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ನಗದು ರಹಿತ ವಹಿವಾಟು ಪಾವತಿಯನ್ನು ಪ್ರೋತ್ಸಾಹಿಸಲು ಈ ಆಂದೋಲವನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರದೇಶದಲ್ಲಿ ನಗದು ರಹಿತ ವಹಿವಾಟು/ಇ-ಪಾವತಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸು ವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News