ತಮಿಳುನಾಡು: ಪಟಾಕಿ ಫ್ಯಾಕ್ಟರಿಯಲ್ಲಿ ಬೆಂಕಿ; ಮೂವರ ಸಾವು
Update: 2016-12-26 23:57 IST
ವಿರುಧುನಗರ,ಡಿ.26: ಜಿಲ್ಲೆಯ ನಾರಾಯಣಪುರಂನ ಪಟಾಕಿ ಫ್ಯಾಕ್ಟರಿಯೊಂದರಲ್ಲಿ ಇಂದು ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಬೆಂಕಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ ಇತರ ಮೂವರು ಕಾರ್ಮಿಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಶಿವಕಾಶಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿರುಬಿಸಿಲು ಮತ್ತು ಗಾಳಿಯಿಂದಾಗಿ ಬೆಂಕಿಯು ಶೀಘ್ರವಾಗಿ ಇಡೀ ಫ್ಯಾಕ್ಟರಿಯನ್ನು ಆವರಿಸಿಕೊಂಡಿದ್ದು, ಈ ಅವಘಡಕ್ಕೆ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದರು.