ಕಾರ್ತಿಕ್‌ರಾಜ್ ಕೊಲೆ ಪ್ರಕರಣ ಸಿಒಡಿ ತನಿಖೆ ನೀಡಲು ಚಿಂತನೆ : ಯು.ಟಿ.ಖಾದರ್
ಕೊಣಾಜೆ , ಡಿ.28 : ಪಜೀರು ಗ್ರಾಮದ ಕಾರ್ತಿಕ್‌ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ರೀತಿಯಲ್ಲಿ ತನಿಖೆ ನಡೆಸಿದರೂ ಇಲ್ಲಿಯವರೆಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಒಡಿಗೆ ವಹಿಸುವ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಚರ್ಚಿಸುವುದಾಗಿ ಆಹಾರ ಸಚಿವ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಅವರು ಬುಧವಾರ ಪಜೀರು ಗ್ರಾಮದ ಕೊಲೆಯಾದ ಕಾರ್ತಿಕ್ ರಾಜ್ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದರು.
ಕಾರ್ತಿಕ್‌ರಾಜ್ ದುಷ್ಕರ್ಮಿಗಳಿಂದ ಕೊಲೆಗೀಡಾಗಿ ಎರಡು ತಿಂಗಳಾದರೂ ಇಲ್ಲಿಯವರೆಗೂ ಆರೋಪಿಗಳ ಸುಳಿವು ಲಭಿಸಿಲ್ಲ . ಮಾತ್ರವಲ್ಲದೆ ಕುಟುಂಬಕ್ಕೂ ನ್ಯಾಯ ಸಿಕ್ಕಿಲ್ಲ. ಪೊಲೀಸರು ಬೇರೆ ಬೇರೆ ಮೂಲಗಳಿಂದ ಮಾಹಿತಿಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತಿದ್ದಾರೆ. ಆದರೂ ಇಷ್ಟು ದಿನವಾದರೂ ಯಾವುದೇ ಅಪರಾಧಿಗಳ ಪತ್ತೆಯಾಗಿಲ್ಲ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುತ್ತಿದ್ದಾರೆ. ಆದರೂ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಾಗೂ ಅಪರಾಧಿಗಳನ್ನು ಶೀಘ್ರವಾಗಿ ಪತ್ತೆಹಚ್ಚುವುದಕ್ಕಾಗಿ ಈ ಪ್ರಕರಣವನ್ನು ಸಿಒಡಿಗೆ ವಹಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಯವರಲ್ಲಿ ಚರ್ಚಿಸಿ ನಿರ್ಣಯ ತೆಗೆದುಕೊಳ್ಳುವುದಾಗಿ ಅವರು ಹೇಳಿದರು.