×
Ad

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸುಂದರಲಾಲ್ ಪಟ್ವಾ ನಿಧನ

Update: 2016-12-28 21:06 IST

ಭೋಪಾಲ್,ಡಿ.28: ಹಿರಿಯ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಮತ್ತು ಎರಡು ಬಾರಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದ ಸುಂದರಲಾಲ್ ಪಟ್ವಾ(92) ಅವರು ಅಲ್ಪಕಾಲದ ಅಸ್ವಾಸ್ಥದ ಬಳಿಕ ಬುಧವಾರ ಇಲ್ಲಿಯ ಬನ್ಸಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಬೆಳಿಗ್ಗೆ ಹೃದಯಾಘಾತಕ್ಕೆ ಗುರಿಯಾದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪಟ್ವಾರ ಪತ್ನಿ ಕೆಲವು ವರ್ಷಗಳ ಹಿಂದೆಯೇ ನಿಧನರಾಗಿದ್ದು, ದಂಪತಿಗೆ ಮಕ್ಕಳಿರಲಿಲ್ಲ. ಅವರ ಸೋದರನ ಪುತ್ರ ಸುರೇಂದ್ರ ಪಟ್ವಾ ಅವರು ರಾಜ್ಯದ ಹಾಲಿ ಬಿಜೆಪಿ ಸರಕಾರದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪಟ್ವಾ ನಿಧನಕ್ಕೆ ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News