ಎದೆನೋವಿನಿಂದ ಪೊಲೀಸ್ ಸಿಬ್ಬಂದಿ ಮೃತ್ಯು
Update: 2016-12-28 21:20 IST
ಕುಂದಾಪುರ, ಡಿ.28: ಕೊಲ್ಲೂರು ಪೊಲೀಸ್ ಠಾಣೆಯ ಹೆಡ್‌ಕಾನ್ ಸ್ಟೇಬಲ್ ಬಿ.ಅಶೋಕ ಕುಮಾರ್(43) ಎಂಬವರು ಡಿ.28ರಂದು ನಸುಕಿನ ವೇಳೆ ಎದೆನೋವಿನಿಂದ ಮೃತಪಟ್ಟಿದ್ದಾರೆ.
ಕುಂದಾಪುರ ಪೊಲೀಸ್ ವಸತಿಗೃಹದಲ್ಲಿ ರಾತ್ರಿ ಊಟ ಮುಗಿಸಿ ಮಲಗಿದ್ದ ಇವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು.
ಆದರೆ ಎದೆನೋವು ಜಾಸ್ತಿಯಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಸುಮಾರು 20ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, ಕಳೆದ ಒಂದೂವರೆ ವರ್ಷಗಳಿಂದ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿ ದ್ದರು. ಸುಮಾರು 4 ತಿಂಗಳಿನಿಂದ ಕುಂದಾಪುರ ಪೊಲೀಸ್ ವಸತಿ ಗೃಹದ 5ನೆ ಬ್ಲಾಕ್‌ನಲ್ಲಿ ತನ್ನ ಸಂಸಾರದೊಂದಿಗೆ ವಾಸಮಾಡಿಕೊಂಡಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.