ಪಾವೂರು ಮಲಾರ್‌ನಲ್ಲಿ ಏಕದಿನ ಮಹಾಸಂಗಮ ಕಾರ್ಯಕ್ರಮ
ಕೊಣಾಜೆ, ಡಿ.28 : ಯಾದ್ ಫೌಂಡೇಶನ್ ಹಾಗೂ ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ಪಾವೂರು ಗ್ರಾಮದ ಮಲಾರ್ ಬದ್ರಿಯಾ ನಗರದಲ್ಲಿ ಮಹಾಸಂಗಮ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಪ್ರಭಾಷಣಕಾರ ಹಾಗೂ ಖ್ಯಾತ ವಾಗ್ಮೀ ನೌಶಾದ್ ಬಾಖವಿಯವರು ಮುಖ್ಯ ಪ್ರಭಾಷಣವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಓರ್ವ ಸಚಿವನಾಗಿದ್ದುಕೊಂಡು ತಮ್ಮ ಮಗಳನ್ನು ಅಲ್ಲಾಹು ಇಷ್ಟಪಡುವಂತಹ ಹಾಫಿಲ್ ಮಾಡಿದಕ್ಕಾಗಿ ಸಚಿವ ಯು.ಟಿ.ಖಾದರ್ ಅವರನ್ನು ನೌಶಾದ್ ಬಾಖವಿಯವರು ಸನ್ಮಾನಿಸಿ ಗೌರವಿಸಿದರು.
ಸಚಿವ ಯು.ಟಿ.ಖಾದರ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಸಯ್ಯದ್ ಪಾಣಕ್ಕಾದ್ ಸ್ವಾದಿಕ್ ಆಲಿ ಶಿಹಾಬ್ ತಂಙಲ್ ದುವಾ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ತಾಲೂಕು ಪಂಚಾಯತ್‌ನ ಅಧ್ಯಕ್ಷರಾದ ಮಹಮ್ಮದ್ ಮೋನು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್.ಕರೀಂ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ, ತಾಲೂಕು ಪಂಚಾಯತ್ ಸದಸ್ಯ ಜಬ್ಬಾರ್ ಬೋಳಿಯಾರ್, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಆಲಿ, ಪಾವುರು ಗ್ರಾಮ ಪಂಚಾಯತ್ ಅಧ್ಯಕ್ಷ ಫಿರೋಜ್ ಮಲಾರ್, ಅಂಬ್ಲಮೊಗರು ಪಂಚಾಯತ್ ಅಧ್ಯಕ್ಷರಾದ ರಫೀಕ್ ಮದಕ, ಕಿನ್ಯಾ ಪಂಚಾಯತ್ ಉಪಾಧ್ಯಕ್ಷ ಸಿರಾಜ್ ಕಿನ್ಯಾ, ಉಳ್ಳಾಲ ಯುವ ಕಾಂಗ್ರೆಸ್‌ನ ಅಧ್ಯಕ್ಷ ನಝರ್ ಷಾ, ಎಂ.ಪಿ.ಹಸನ್, ಹಮೀದ್ ಕಣ್ಣೂರು, ಯಾದ್ ಫೌಂಡೇಶನ್ ಅಧ್ಯಕ್ಷ ರಿಯಾದ್, ಟುಡೇ ಫೌಂಡೇಶನ್ ಅಧ್ಯಕ್ಷರಾದ ಫಾರೂಕ್ ಮುಂತಾದವರು ಉಪಸ್ಥಿತರಿದ್ದರು.