ಮಟ್ಟು: ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಚಾಲನೆ
Update: 2016-12-29 00:00 IST
ಮುಲ್ಕಿ, ಡಿ.28: ಅತಕಾರಿಬೆಟ್ಟು ಗ್ರಾಮದ ಮಟ್ಟು ಪ್ರದೇಶದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ 16.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಶಾಸಕ ಅಭಯಚಂದ್ರ ಜೈನ್ ಉದ್ಘಾಟಿಸಿದರು. ಈ ಸಂದರ್ಭ ಊರ ಹಿರಿಯರಾದ ಯಜ್ಞಪಂಡಿತ್ ಶಾಸಕರನ್ನು ಅಭಿನಂದಿಸಿ ದರು. ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷೆ ಶಾರದಾ ವಸಂತ್, ಉಪಾಧ್ಯಕ್ಷ ಕಿಶೋರ್ ಶೆಟ್ಟಿ ದೆಪ್ಪುಣಿ ಗುತ್ತು, ಸದಸ್ಯ ದಯಾನಂದ ಕೋಟ್ಯಾನ್ ಮಟ್ಟು, ಜಿಪಂ ಇಂಜಿನಿಯರ್ ಪ್ರಶಾಂತ್ ಆಳ್ವ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಕೋಟ್ಯಾನ್ ಮಟ್ಟು, ಮುಲ್ಕಿ ನಪಂ ಸದಸ್ಯರಾದ ಪುತ್ತುಬಾವ, ಹಸನ್ ಬಶೀರ್ ಕುಳಾಯಿ, ಅಶೋಕ್ ಪೂಜಾರ್, ಗುತ್ತಿಗೆದಾರ ಅಬ್ಬಾಸ್ ಅಲಿ, ವೀರಯ್ಯ ಹಿರೇಮಠ್, ಉತ್ತಮ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.