×
Ad

ಯಡಿಯೂರಪ್ಪ ವಿರುದ್ಧ ಅಕ್ರಮ ಆಸ್ತಿ ಆರೋಪ ನಿರಾಧಾರ

Update: 2016-12-29 16:13 IST

ಶಿವಮೊಗ್ಗ, ಡಿ.29: ಅಕ್ರಮ ಆಸ್ತಿ ಸಂಪಾದನೆ ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಲ್ಲಿನ ಸಿವಿಲ್ ನ್ಯಾಯಾಲಯ ತಿರಸ್ಕರಿಸಿದೆ. ಈ ತೀರ್ಪಿನಿಂದ ಬಿಎಸ್‌ವೈ ನಿರಾಳರಾಗಿದ್ದಾರೆ.

ಬಿಎಸ್‌ವೈ ಆಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆಂದು ಆರೋಪಿಸಿ ಸ್ಥಳೀಯ ವಕೀಲ ವಿನೋದ್ ನ್ಯಾಯಾಲಯಕ್ಕೆ 3 ಅರ್ಜಿಗಳನ್ನು ಸಲ್ಲಿಸಿದ್ದರು.

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಸಿವಿಲ್ ನ್ಯಾಯಾಲಯ ಬಿಎಸ್ ಯಡಿಯೂರಪ್ಪರ ವಿರುದ್ಧ ಆರೋಪ ನಿರಾಧಾರವಾಗಿದೆ ಎಂದು ಹೇಳಿ ಅರ್ಜಿಗಳನ್ನು ವಜಾಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News