ಕಾರು-ಬೈಕ್ ಢಿಕ್ಕಿ : ಬೈಕ್ ಸವಾರ ಗಂಭೀರ
Update: 2016-12-30 20:36 IST
ಬಂಟ್ವಾಳ, ಡಿ. 30: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್‌ನಲ್ಲಿ ಕಾರು ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಗಾಯಗೊಂಡವರನ್ನು ಪೆರ್ನೆ ನಿವಾಸಿ ಶಶಿ ಎಂದು ಗುರುತಿಸಲಾಗಿದೆ.
ಅವರು ಮಾಣಿ ಕಡೆಯಿಂದ ಪೆರ್ನೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ದಾಖಲು ಮಾಡಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.