ಹೊಸ ವರ್ಷಾಚರಣೆ: ನಿಯಮ ಪಾಲನೆಗೆ ಪೊಲೀಸ್ ಇಲಾಖೆ ಸೂಚನೆ

Update: 2016-12-30 18:27 GMT

ಉಡುಪಿ, ಡಿ.30: ಹೊಸ ವರ್ಷ ಆಚರಣೆಯ ಸಂಬಂಧ ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ಕಟ್ಟುನಿಟ್ಟಾಗಿ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದೆ.

  ಡಿ.31ರಂದು ರಾತ್ರಿ ಹೊಸ ವರ್ಷಾಚರಣೆಯ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳು ಮತ್ತು ವಿಶೇಷ ಕೂಟಗಳನ್ನು ಒಳಾವರಣದಲ್ಲೇ ನಡೆಸಿ, ಮಧ್ಯರಾತ್ರಿ 12:30ರೊಳಗೆ ಮುಗಿಸಬೇಕು. ವರ್ಷಾಚರಣೆ ಆಚರಿಸಲು ಮತ್ತು ಧ್ವನಿವಧರ್ಕ ಅಳವಡಿಸಲು ಡಿ.31ರ ಸಂಜೆ 4ಗಂಟೆಯೊಳಗೆ ಪೊಲೀಸ್ ಅೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು. ಧ್ವನಿವರ್ಧಕವನ್ನು ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಕಡಿಮೆ ಧ್ವ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು.

ಹೊಸ ವರ್ಷಾಚರಣೆಯನ್ನು ನಡೆಸುವ ಹೊಟೇಲ್, ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಯಾವುದೇ ಅಹಿತಕರ ಘಟನೆಗಳಾಗದಂತೆ ಮುಂಜಾಗೃತಾ ಕ್ರಮ ತೆಗೆದುಕೊಳ್ಳಬೇಕು. ಆಚರಣೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಬೆತ್ತಲೆ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಸಲಾಗಿದೆ. ರೆಸ್ಟೋರಂಟ್ ಮತ್ತು ಮದ್ಯಪಾನ ಸರಬರಾಜು ಮಾಡುವ ಹೊಟೇಲ್‌ಗಳಲ್ಲಿ ಸರಕಾರ ನಿಗದಿ ಪಡಿಸಿದ ಸಮಯಕ್ಕಿಂತ ಹೆಚ್ಚಿನ ಸಮಯದಲ್ಲಿ ನೂತನ ವರ್ಷಾಚರಣೆಯ ಸಂಬಂಧ ಕಾರ್ಯಕ್ರಮ ನಡೆಸಬೇಕಾದಲ್ಲಿ ಅಬಕಾರಿ ಇಲಾಖೆಯಿಂದ ಲಿಖಿತವಾಗಿ ಹೆಚ್ಚಿನ ಅವಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಮತ್ತು ಆ ಪತ್ರದ ಪ್ರತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು. ಈ ಅನುಮತಿ ಪಡೆದಿದ್ದರೂ ಸಹ ಎಲ್ಲ ಕಾರ್ಯಕ್ರಮಗಳನ್ನು ರಾತ್ರಿ 12:30ರೊಳಗೆ ಮುಕ್ತಾಯ ಮಾಡಬೇಕು.

ವಿದ್ಯಾರ್ಥಿಗಳು ಹಾಗೂ ಯುವಕರು ಹೊಸ ವರ್ಷಾಚರಣೆ ನೆಪದಲ್ಲಿ ರಾತ್ರಿ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಛೆಗೆ ವಿರುದ್ಧವಾಗಿ ಶುಭಕೋರುವ ನೆಪದಲ್ಲಿ ಕಿರಿಕಿರಿ ಮಾಡಬಾರದು. ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಶುಭಕೋರುವ ನೆಪದಲ್ಲಿ ಕೀಟಲೆ/ಅಸಭ್ಯವಾಗಿ ವರ್ತಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರಗಿಸಲಾಗುವುದು. ಯಾವುದೇ ಕಾರಣಕ್ಕೂ ಸಾರ್ವಜನಿಕರ ಮನೆಗಳ ಮುಂದೆ, ವಿದ್ಯಾರ್ಥಿಗಳ ಹಾಸ್ಟೆಲ್, ವರ್ಕಿಂಗ್ ಮಹಿಳಾ ಹಾಸ್ಟೆಲ್ ಕಾಂಪೌಂಡ್ ಒಳಗೆ ಶುಭಾಶಯ ಕೋರುವ ನೆಪದಲ್ಲಿ ಅನಕೃತವಾಗಿ ಯಾವುದೇ ವ್ಯಕ್ತಿ ಅಥವಾ ಗುಂಪು ಹೋಗಿ ಕಿರಿಕಿರಿ/ಅಸಭ್ಯವಾಗಿ ವರ್ತನೆ ಮಾಡುವುದನ್ನು ಮತ್ತು ಬಲವಂತವಾಗಿ ಶುಭಾಶಯ ಕೋರುವುದನ್ನು ನಿಷೇಸಲಾಗಿದೆ.

   ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಸಲಾಗಿದೆ. ಸಮುದ್ರ ತೀರ ಪ್ರದೇಶ, ಬೀಚ್‌ಗಳಲ್ಲಿ ಮದ್ಯಪಾನ, ಅಶ್ಲೀಲ ವರ್ತನೆಯನ್ನು ನಿಷೇಸಲಾಗಿದೆ. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅರ್ಜಿದಾರರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಕಾರ್ಯಕ್ರಮದ ಆಯೋಜಕರು ಪರವಾನಿಗೆಯಲ್ಲಿ ನಮೂದಿಸಿದ ಶರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪೊಲೀಸ್ ಇಲಾಖೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News