ಯಾವ ಸರಕಾರ ಬಂದರೂ ಎತ್ತಿನಹೊಳೆ ಯೋಜನೆ ನಿಲ್ಲದು: ರೈ

Update: 2016-12-31 10:55 GMT

ಮಂಗಳೂರು, ಡಿ.31: ರಾಜ್ಯದಲ್ಲಿ ಯಾವ ಸರಕಾರ ಅಧಿಕಾರಕ್ಕೆ ಬಂದರೂ ಎತ್ತಿನಹೊಳೆ ಯೋಜನೆ ನಿಲ್ಲದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ಪಕ್ಷದ ನೂತನ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ತಂದ ಯೋಜನೆಯಾಗಿದೆ. ಅದನ್ನು ಕಾಂಗ್ರೆಸ್ ಸರಕಾರ ಮುಂದುವರಿಸುತ್ತಿದೆ. ಎತ್ತಿನಹೊಳೆ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಈಗಾಗಲೆ ತಜ್ಞರ ಜೊತೆ ಮುಖ್ಯಮಂತ್ರಿ ಚರ್ಚೆ ನಡೆಸಿದ್ದಾರೆ. ಯೋಜನೆಯ ವಿರುದ್ಧದ ಹೋರಾಟಗಾರರಿಗೂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಗೆ ಸರಕಾರ ಅನುಮತಿ ಕೊಟ್ಟಿಲ್ಲ ಎಂದು ಕೇಂದ್ರ ಅರಣ್ಯ, ಪರಿಸರ ಮತ್ತು ಹಮಾಮಾನ ಇಲಾಖಾ ಸಚಿವ ಅನಿಲ್ ಮಾಧವ ಧವೆ ನೀಡಿದ ಪ್ರತಿಕ್ರಿಯೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ರೈ, ಹಾಗಿದ್ದರೆ ಅವರು ಈ ಯೋಜನೆಯನ್ನು ನಿಲ್ಲಿಸಬಹುದಲ್ವ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಮೊಯ್ದಿನ್ ಬಾವಾ, ಮೇಯರ್ ಹರಿನಾಥ್, ಮುಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಟಿ.ಕೆ.ಸುಧೀರ್, ಫಾರೂಕ್ ಉಳ್ಳಾಲ್, ನಝೀರ್ ಬಜಾಲ್, ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News