ಕಾರು-ಬೈಕ್ ಢಿಕ್ಕಿ: ಹೋಂ ಗಾರ್ಡ್‌ಗೆ ಗಾಯ

Update: 2016-12-31 18:43 GMT

ಪುತ್ತೂರು, ಡಿ.31: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ವರದಿಯಾಗಿದೆ.

ಪುತ್ತೂರು ತಾಲೂಕಿನ ಮಾಡನ್ನೂರು ಗ್ರಾಮದ ಮಾಯಿಲಕೊಚ್ಚಿ ನಿವಾಸಿ ಕೀರ್ತನ್ ಗಾಯಗೊಂಡ ವ್ಯಕ್ತಿ. ಪುತ್ತೂರು ಸಂಚಾರಿ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿರುವ ಇವರು ಪುತ್ತೂರಿನಿಂದ ಮನೆಗೆ ಬೈಕ್‌ನಲ್ಲಿ ತೆರಳುತ್ತಿರುವ ವೇಳೆ ಎದುರಿನಿಂದ ಬಂದ ಕಾರೊಂದು ಕೌಡಿಚ್ಚಾರು ಸಮೀಪ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಾಯಗೊಂಡ ಅವರನ್ನು ಪುತ್ತೂರು ಆಸ್ಪತೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸಂಚಾರಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News