ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಅಶ್ವಾನ್ ಸಾದಿಕ್ ಆಯ್ಕೆ
Update: 2017-01-03 17:10 IST
ಬಂಟ್ವಾಳ, ಜ. 3: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕಿನ ನೂತನ ಅಧ್ಯಕ್ಷರನ್ನಾಗಿ ಅಶ್ವಾನ್ ಸಾದಿಕ್‌ರವರನ್ನು ಇಂದು ನಡೆದ ತಾಲೂಕು ಪ್ರತಿನಿಧಿಗಳ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯನ್ನಾಗಿ ಹಮೀದ್ ಸಲ್ಮಾನ್‌ರವರು ಆಯ್ಕೆಯಾದರು.
ಸಿಎಫ್‌ಐ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ತಪ್ಸೀರ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ತಾಲೂಕು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಂಶೀರ್ ಕಲ್ಲಡ್ಕ ವಾರ್ಷಿಕ ವರದಿ ಮಂಡಿಸಿದರು.
ಈ ಸಂದರ್ಭದಲ್ಲಿ ಸಿಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಮ್ರಾನ್ ಹಾಗೂ ಜಿಲ್ಲಾ ಸಮಿತಿ ಸದಸ್ಯ ಮುಹಮ್ಮದ್ ರಿಯಾಝ್ ಉಪಸ್ಥಿತರಿದ್ದರು.
ತಾಲೂಕಿನ ವಿಟ್ಲ, ಕಲ್ಲಡ್ಕ, ಮೆಲ್ಕಾರ್, ಬಂಟ್ವಾಳ, ಬಿ.ಸಿ.ರೋಡ್ ಮೊದಲಾದ ಕಡೆಗಳಿಂದ ಪ್ರತಿನಿಧಿಗಳು ಭಾಗವಹಿಸಿದರು.