ಜ.6ರಂದು ಸಂತ ಫಿಲೋಮಿನಾ ಪ್ರೌಢಶಾಲೆ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಪುತ್ತೂರು, ಜ. 3 : ಪುತ್ತೂರಿನ ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲೆಯ ವಜ್ರಮಹೋತ್ಸವ ಸ್ಮಾರಕ ರೂ. 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ ಜ.6ರಂದು ನಡೆಯಲಿದೆ ಎಂದು ಶಾಲಾ ಆಡಳಿತ ಮಂಡಳಿ ಜೊತೆ ಕಾರ್ಯದರ್ಶಿ ಫಾ. ಆಲ್ಫ್ರೆಡ್ ಪಿಂಟೋ ತಿಳಿಸಿದ್ದಾರೆ.
ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉದ್ಘಾಟನಾ ಸಮಾರಂಭಕ್ಕೆ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಕೇಂದ್ರ ಸಾಂಖ್ಯಿಕ ಸಚಿವ ಡಿ.ವಿ.ಸದಾನಂದ ಗೌಡ ಉಪಸ್ಥಿತಿಯಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಅಲೋಶಿಯಸ್ ಪೌಲ್ ಡಿ’ಸೋಜ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಶಾಸಕಿ ಶಕುಂತಳಾ ಶೆಟ್ಟಿ, ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್, ಜಸ್ಟೀಸ್ ರಾಮಾಜೋಯಿಸ್, ಡಾ. ಬಿ. ಜಯಶ್ರೀ, ಕೆ. ರಹ್‌ಮಾನ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್, ಕೆ.ಪ್ರತಾಪ್ ಚಂದ್ರ ಶೆಟ್ಟಿ ಮತ್ತಿತರರು ಆತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರೌಡಶಾಲೆಯ ಮುಖ್ಯಗುರು ಓಸ್ವಾಲ್ಡ್ ರೋಡ್ರಿಗಸ್, ಕ್ಯಾಂಪಸ್ ನಿರ್ದೇಶಕ ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ವಿಜಯ ಸರಸ್ವತಿ ಉಪಸ್ಥಿತರಿದ್ದರು.