ಬೈಕ್ ಹಿಂಬದಿ ಸವಾರಳ ಸಾವು
Update: 2017-01-03 23:19 IST
ಕಾರವಾರ, ಜ.3: ನಗರದ ಕಾಜುಬಾಗದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಮಹಿಳೆಯೊಬ್ಬಳು ಆಯತಪ್ಪಿಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ.
ತಾಲೂಕಿನ ಕಠಿಣಕೋಣ ಸುಂಕೇರಿಯ ನಿವಾಸಿ ರುಕ್ಮಿಣಿ ಕಾಳೆ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಇವರು ಮಗ ಗೌರೀಶ ಅವರೊಂದಿಗೆ ಬೈಕಿನ ಹಿಂಬದಿ ಕುಳಿತು ಸಾಗುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದಿದ್ದರಿಂದ ತಲೆಗೆ ತೀವ್ರ ಗಾಯವಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗೋವಾಕ್ಕೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.