ನಳಿನ್ ಹೇಳಿಕೆಗೆ ಉಡುಪಿ ಜಿಲ್ಲಾ ಎಸ್‌ಡಿಪಿಐ ನಿಂದ ಖಂಡನೆ
Update: 2017-01-03 23:38 IST
ಉಡುಪಿ, ಜ.3: ಬಿಜೆಪಿಯ ಕಾರ್ಯಕರ್ತ ಕಾರ್ತಿಕ್ ರಾಜ್ ಕೊಲೆಯ ಸಂಬಂಧ ನಡೆದ ಪ್ರತಿಭಟನೆಯಲ್ಲಿ ದ.ಕ. ಜಿಲ್ಲೆಗೆ ಬೆಂಕಿ ಹಚ್ಚುವ ಕುರಿತ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಉಡುಪಿ ಜಿಲ್ಲಾ ಎಸ್‌ಡಿಪಿಐ ತೀವ್ರವಾಗಿ ಖಂಡಿಸಿದೆ.
ಇಂತಹ ನಾಚಿಕೆಗೆಟ್ಟ ಹೇಳಿಕೆ ನೀಡಿ ತಮ್ಮ ಭಯೋತ್ಪಾದನೆಯನ್ನು ಪ್ರಸ್ತುತ ಪಡಿಸಿರುವ ಬಿಜೆಪಿಯ ಧೋರಣೆಯ ನೀಚ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರ ಬಿಜೆಪಿ ಸರಕಾರ ಸಂಪೂರ್ಣವಾಗಿ ವಿಫಲವಾಗಿರುವುದನ್ನು ಜನರ ಗಮನದಿಂದ ಮೆರೆಮಾಚಲು ಇಂತಹ ಹೇಳಿಕೆ ನೀಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ರೆಹಮಾನ್ ಮಲ್ಪೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.