×
Ad

ಆದರ್ಶನೀಯ ಸಹಕಾರ ಸಚಿವರು: ಡಾ.ರಾಜೇಂದ್ರ ಕುಮಾರ್

Update: 2017-01-04 00:22 IST

ಮಂಗಳೂರು, ಜ.3: ಕರ್ನಾಟಕ ರಾಜ್ಯದ ಸಹಕಾರ ಹಾಗೂ ಸಕ್ಕರೆ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದು, ಇವರಿಗೆ ನುಡಿನಮನ ಸಲ್ಲಿಸುವ ಶ್ರದ್ಧಾಂಜಲಿ ಸಭೆಯು ಇಂದು ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆಯಿತು.

 ಸಭೆಯ ಅಧ್ಯಕ್ಷತೆಯನ್ನು ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದು ಜನಮಾನಸ ದಲ್ಲಿ ತನ್ನ ಹೆಸರನ್ನು ಸಹಕಾರ ಸಚಿವ ರಾದ ಎಚ್.ಎಸ್. ಮಹದೇವ ಪ್ರಸಾದ್‌ಚಿರಸ್ಧಾಯಿಗೊಳಿಸಿದ್ದಾರೆ. ಅವರು ಪ್ರಾಮಾಣಿಕ ರೀತಿಯಲ್ಲಿ ತನ್ನ ಖಾತೆಯಕೆಲಸ ಕಾರ್ಯಗಳನ್ನು ನಿರ್ವಹಿಸಿದ್ದಾರೆ. ಅದರಲ್ಲೂ ರೈತರ, ಬಡ ವರ್ಗದ, ಮಹಿಳೆಯರ ಬಗ್ಗೆ ವಿಶೇಷ ಕಾಳಜಿ ಯನ್ನು ಹೊಂದಿದ್ದ ಅವರು ಸಹಕಾರ ಕ್ಷೇತ್ರದ ಮೂಲಕ ಇವರಿಗೆ ವಿಶೇಷ ಕೊಡುಗೆಯನ್ನು ನೀಡಿದ್ದಾರೆ ಎಂದು ಡಾ.ಎಂ.ಎನ್. ನುಡಿನಮನ ಸಲ್ಲಿಸಿದ್ದಾರೆ.

ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ಅಧ್ಯಕ್ಷರಾದ ಹರೀಶ್ ಆಚಾರ್, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ. ಸಲೀಂ, ಬ್ಯಾಂಕ್‌ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ಸದಾಶಿವ ಉಳ್ಳಾಲ್, ಕೆ.ಎಸ್.ದೇವರಾಜ್, ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಸತೀಶ್ ಎಸ್., ಬಂಟ್ವಾಳ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್ ಈ ಸಂದರ್ಭ ಮಾತನಾಡಿ ನುಡಿನಮನ ಸಲ್ಲಿಸಿದರು.

ಬ್ಯಾಂಕ್ ನಿರ್ದೇಶಕರಾದ ವಿನಯಕುಮಾರ್ ಸೂರಿಂಜೆ, ಎಂ. ವಾದಿರಾಜಶೆಟ್ಟಿ, ರಘುರಾಮ್ ಶೆಟ್ಟಿ, ರಾಜು ಪೂಜಾರಿ, ಶಶಿಕುಮಾರ್ ರೈ, ಎಸ್.ಬಿ.ಜಯರಾಮ್ ರೈ, ಶ್ರೀದೇವಿ ಪ್ರಸಾದ್ ಶೆಟ್ಟಿಬೆಳಪು, ಭಾಸ್ಕರ್ ಎಸ್. ಕೋಟ್ಯಾನ್, ಬ್ಯಾಂಕಿನ ಸಲಹೆಗಾರರಾದ ಕೆ.ಎಸ್. ಹಿಮವಂತ ಗೋಪಾಲ್, ದ.ಕ. ಜಿಲ್ಲಾ ಸಹಕಾರಿ ಒಕ್ಕೂಟದ ಉಪಾಧ್ಯಕ್ಷರಾದ ಸುಂದರ ಗೌಡ ಇಚ್ಚಿಲ ಹಾಗೂಜಿಲ್ಲೆಯ ಸಹಕಾರಿಗಳು, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರು ಹಾಗೂ ಬ್ಯಾಂಕ್ ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News