ಉಡುಪಿ ಬಯಲು ಶೌಚಮುಕ್ತ ನಗರ ಘೋಷಣೆಗೆ ಸಜ್ಜಾಗಿ : ಜಿಲ್ಲಾಧಿಕಾರಿ ವೆಂಕಟೇಶ್

Update: 2017-01-04 13:28 GMT

ಉಡುಪಿ, ಜ.4: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ,  ಈ ತಿಂಗಳೊಳಗೆ ಜಿಲ್ಲೆಯ ಎಲ್ಲಾ ನಗರಗಳನ್ನು ಬಯಲು ಶೌಚಮುಕ್ತ ನಗರಗಳನ್ನಾಗಿ ಘೋಷಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಯಲು ಶೌಚಮುಕ್ತ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

 ಜಿಲ್ಲೆಯಲ್ಲಿ ಉಡುಪಿ ನಗರಸಭೆ ಈಗಾಗಲೇ ಬಯಲು ಶೌಚಮುಕ್ತ ನಗರವಾಗಿ ಘೋಷಣೆಯಾಗಿದೆ. ಉಳಿದಂತೆ ಕುಂದಾಪುರ, ಕಾರ್ಕಳ, ಕಾಪು ಪುರಸಭೆಗಳು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್‌ಗಳು ತಮ್ಮ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಶೌಚಾಲಯ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ, ಜನವರಿ 26ರಂದು ಬಯಲು ಶೌಚಮುಕ್ತ ನಗರಗಳಾಗಿ ಘೋಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

  ಎಲ್ಲಾ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಸಮುದಾಯ ಮತ್ತು ಸಾರ್ವಜನಿಕ ಶೌಚಾಲಯದ ಗೋಡೆಗಳ ಮೇಲೆ ಪೈಂಟಿಂಗ್ ಡ್ರೈವ್ ಮಾಡುವಂತೆ ಹಾಗೂ ಸ್ವಚ್ಛತೆಗೆ ಸಂಬಂಧಿಸಿದ ವಿಷಯಗಳ ಹೋರ್ಡಿಂಗ್ಸ್, ಪೋಸ್ಟರ್‌ಗಳನ್ನು ಪ್ರದರ್ಶಿಸುವಂತೆ ಹಾಗೂ ನಾಗರಿಕರಿಗೆ ಸ್ವಚ್ಛತೆಯ ಕುರಿತು ಹೆಚ್ಚಿನ ಅರಿವು ಮೂಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಶಾಲಾ ವಿದ್ಯಾರ್ಥಿ ಗಳಿಗೆ ಚಿತ್ರಕಲೆ, ಪ್ರಬಂಧ ಮುಂತಾದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಅರಿವು ಮೂಡಿಸುವಂತೆ ತಿಳಿಸಿದರು.

ಎಲ್ಲಾ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಸಮುದಾಯ ಮತ್ತು ಸಾರ್ವಜನಿಕ ಶೌಚಾಲಯದ ಗೋಡೆಗಳ ಮೇಲೆ ಪೈಂಟಿಂಗ್ ಡ್ರೈವ್‌ ಮಾಡುವಂತೆ ಹಾಗೂ ಸ್ವಚ್ಛತೆಗೆ ಸಂಬಂಧಿಸಿದ ವಿಷಯಗಳ ಹೋರ್ಡಿಂಗ್ಸ್,ಪೋಸ್ಟರ್‌ಗಳನ್ನು ಪ್ರದರ್ಶಿಸುವಂತೆ ಹಾಗೂ ನಾಗರಿಕರಿಗೆ ಸ್ವಚ್ಛತೆಯ ಕುರಿತು ಹೆಚ್ಚಿನ ಅರಿವು ಮೂಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ,ಪ್ರಬಂಧ ಮುಂತಾದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಅರಿವು ಮೂಡಿಸುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಹಾಸ್ಟೆಲ್‌ಗಳ ಶೌಚಾಲಯಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು.

ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಹಾಸ್ಟೆಲ್‌ಗಳ ಶೌಚಾಲಯಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣ ಪ್ರಭ ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News