×
Ad

​ ದಂತ ಆರೋಗ್ಯ ಮಾಹಿತಿ ಶಿಬಿರ

Update: 2017-01-05 17:17 IST

ಮಂಗಳೂರು, ಜ.5 ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಮತ್ತು ಶಾಲಾಭಿವೃದ್ಧಿ ಸಮಿತಿಯ ಜಂಟಿ ಆಶ್ರಯದಲ್ಲಿ ಸೋಮೇಶ್ವರ ಉಚ್ಚಿಲದ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ಉಚಿತ ದಂತ ಆರೋಗ್ಯ ಮಾಹಿತಿ ಶಿಬಿರ, ಉಚಿತ ದಂತ ಕುಂಚ ಮತ್ತು ದಂತ ಚೂರ್ಣ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಮುರಲಿ ಮೋಹನ್ ಚೂಂತಾರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಶಿಕ್ಷಕಿಯರಾದ ರಾಜೀವಿ, ಬಬಿತಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸತ್ಯಮ್ಮ ಪ್ರಾಸ್ತವಿಕವಾಗಿ ಮಾತನಾಡಿದರು.ಶಿಕ್ಷಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿಗಳಿಗೆ ಉಚಿತವಾಗಿ ಟೂಥ್ ಬ್ರಶ್ ಮತ್ತು ಟೂಥ್ ಪೇಸ್ಟ್ ವಿತರಿಸಲಾಯಿತು. ದಂತ ಆರೋಗ್ಯದ ಬಗ್ಗೆ ಮಾಹಿತಿ ನೀಡುವ 15 ಪುಸ್ತಕಗಳನ್ನು ಶಾಲಾ ಗ್ರಂಥಾಲಯಕ್ಕೆ ಉಚಿತವಾಗಿ ಸರೋಜಿನಿ ಪ್ರತಿಷ್ಠಾನದಿಂದ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News