ಜ.25 ರಂದು ಮತದಾರರ ದಿನಾಚರಣೆ
ಮಂಗಳೂರು, ಜ.5: ರಾಷ್ಟ್ರೀಯ ಮತದಾರರ ದಿನಾಚರಣೆ ಜ.25 ರಂದು ನಡೆಯಲಿದೆ. ಈ ಕುರಿತು ಪೂರ್ವಭಾವಿ ಸಭೆ ಅಪರ ಜಿಲ್ಲಾಧಿಕಾರಿ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅವರು ಮಾತನಾಡಿ, ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಮಾಡಲಾಗುವುದು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಹೊಸ ಮತದಾರರಿಗೆ ಎಪಿಕ್ ಕಾರ್ಡನ್ನೂ ಸಮಾರಂಭದಲ್ಲಿ ನೀಡಲಾಗುವುದು ಎಂದರು.
ಮತದಾರರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ 15-17 ವಯಸ್ಸಿನ ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ವಿದ್ಯಾರ್ಥಿಗಳೊಂದಿಗೆ ಚಿತ್ರಕಲೆ ಸ್ಪರ್ಧೆಯನ್ನೂ ಏರ್ಪಡಿಸಲಾಗಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು, ನಾಗರಿಕರ ಜವಾಬ್ದಾರಿ ಹೆಚ್ಚಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಮಂಗಳೂರು ಸಹಾಯಕ ಆಯುಕ್ತ ಎ.ಸಿ.ರೇಣುಕಾ ಪ್ರಸಾದ್, ಮಂಗಳೂರು ತಹಶೀಲ್ದಾರ್ ಮಾಣಿಕ್ಯ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.