ಶ್ವೇತನ್ ಚೆಂಗಪ್ಪಗೆ ‘ಶಿಕ್ಷಣ ರತ್ನ’
Update: 2017-01-05 23:22 IST
ನಾಪೊಕ್ಲು, ಜ.5: ಕರ್ನಾಟಕ ಸಂಸ್ಕೃತಿ ಅಕಾಡಮಿ ಮತ್ತು ರಾಷ್ಟ್ರೀಯ ರಾಜಕೀಯ ಶಿಕ್ಷಣ ತರಬೇತಿ ಸಂಸ್ಥೆ ವತಿಯಿಂದ ನೀಡಲಾಗುವ ಶಿಕ್ಷಣ ರತ್ನ ಪ್ರಶಸ್ತಿಗೆ ಬಲ್ಲಮಾವಟಿಯ ಚೀಯಕಪೂವಂಡ ಶ್ವೇತನ್ ಚಂಗಪ್ಪ ಭಾಜನರಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಡಾ. ಎಂ.ವಿ. ರಾಜಶೇಖರನ್ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
ಶ್ವೇತನ್ ಚೆಂಗಪ್ಪಅವರು 2010ರಲ್ಲಿ ಆದರ್ಶ ಶಿಕ್ಷಕಿ ಪ್ರಶಸ್ತಿಗೂ ಭಾಜನರಾಗಿದ್ದರು. ಇವರು ಭಾಗಮಂಡಲ ಜ್ಞಾನೋದಯ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.