ಬಿಜೆಪಿ ಮಹಿಳಾ ಮೋರ್ಚಾದಿಂದ ವಿದ್ಯಾರ್ಥಿನಿಯರ 700 ಹಾಸ್ಟೆಲ್‌ಗಳ ಸಮೀಕ್ಷೆ
Update: 2017-01-06 12:08 IST
ಬೆಂಗಳೂರು, ಜ.6: ರಾಜ್ಯಾದ್ಯಂತ ಇರುವ ಸಮಾಜಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ 700 ಬಾಲಕಿಯರ ಹಾಸ್ಟೆಲ್‌ಗಳ ಸಮೀಕ್ಷೆ ನಡೆಸಿರುವ ಬಿಜೆಪಿ ಮಹಿಳಾ ಮೋರ್ಚಾ ಅಲ್ಲಿನ ಅವ್ಯವಸ್ಥೆಗಳ ಕುರಿತ ವರದಿಯನ್ನು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರಿಗೆ ಇಂದು ಸಲ್ಲಿಸಿತು.
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ, ವಿಧಾನ ಪರಿಷತ್ ಸದಸ್ಯೆ ತಾರಾ, ಶಾಸಕ ರಾಘವೇಂದ್ರ ಉಪಸ್ಥಿತಿಯಲ್ಲಿ ಸಚಿವರನ್ನು ಭೇಟಿಯಾದ ನಿಯೋಗವು ಹಾಸ್ಟೆಲ್‌ಗಳ ಅವ್ಯವಸ್ಥೆಗಳ ಬಗ್ಗೆ ಚರ್ಚಿಸಿತು.
ಈ ಮಾತನಾಡಿದ ಸಚಿವರು, ವರದಿಯಲ್ಲಿರುವ ಅಂಶಗಳನ್ನು ಪರಿಶೀಲಿಸಿ ಹಾಸ್ಟೆಲ್ ಗಳ ಸ್ಥಿತಿಯ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಪತ್ರ ಮುಖೇನ ತಿಳಿಸುವುದಾಗಿ ಭರವಸೆ ನೀಡಿದರು.
ಅಗತ್ಯವಿರುವೆಡೆಗಳಲ್ಲಿ ಮಹಿಳಾ ವಾರ್ಡನ್‌ಗಳ ನೇಮಕಕ್ಕೆ ಬರುವ ಶೈಕ್ಷಣಿಕ ವರ್ಷದಿಂದಲೇ ಕ್ರಮ ಕೈಗೊಳ್ಳಲಾಗುವುದು. ಸ್ವಂತ ಕಟ್ಟಡಗಳ ನಿರ್ಮಾಣಕ್ಕೂ ಅಗತ್ಯ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಸಚಿವರು ನಿಯೋಗಕ್ಕೆ ಭರವಸೆ ನೀಡಿದರು.