×
Ad

ಕ್ರಿಕೆಟ್‌ನ ಮೂರೂ ಮಾದರಿಗೆ ವಿರಾಟ್ ಕೊಹ್ಲಿ ನಾಯಕ, ಯುವಿ ವಾಪಸ್

Update: 2017-01-06 16:45 IST

 ಹೊಸದಿಲ್ಲಿ, ಜ.6: ಇಂಗ್ಲೆಂಡ್ ವಿರುದ್ಧ ಜ.15 ರಿಂದ ಆರಂಭವಾಗಲಿರುವ ಸೀಮಿತ ಓವರ್ ಕ್ರಿಕೆಟ್ ಸರಣಿಗೆ ಟೀಮ್ ಇಂಡಿಯಾವನ್ನು ಶುಕ್ರವಾರ ಪ್ರಕಟಿಸಲಾಗಿದೆ.

ಮುಂಬೈನಲ್ಲಿ ಸಭೆ ಸೇರಿದ ಎಂಎಸ್‌ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ನಿರೀಕ್ಷೆಯಂತೆಯೇ ಟೆಸ್ಟ್ ಕ್ರಿಕೆಟ್‌ನ ನಾಯಕ ಕೊಹ್ಲಿಗೆ ಏಕದಿನ ಹಾಗೂ ಟ್ವೆಂಟಿ-20 ಕ್ರಿಕೆಟ್‌ನ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ.

  ದಿಲ್ಲಿಯ ಯುವ ಬ್ಯಾಟ್ಸ್‌ಮನ್ ರಿಷಬ್ ಪಂತ್ ಟ್ವೆಂಟಿ-20 ತಂಡಕ್ಕೆ ಇದೇ ಮೊದಲ ಬಾರಿ ಆಯ್ಕೆಯಾಗಿದ್ದಾರೆ. ಯುವರಾಜ್ ಸಿಂಗ್ ಬಹುದಿನಗಳ ಬಳಿಕ ತಂಡಕ್ಕೆ ವಾಪಸಾಗಿದ್ದಾರೆ. ಕನ್ನಡಿಗರಾದ ಕೆಎಲ್ ರಾಹುಲ್, ಮನೀಶ್ ಪಾಂಡೆ ತಂಡದಲ್ಲಿದ್ದಾರೆ.

ಅದೇ ರೀತಿ ಬುಧವಾರ ದಿಢೀರನೆ ಸೀಮಿತ ಓವರ ಕ್ರಿಕೆಟ್ ನಾಯಕತ್ವ ತ್ಯಜಿಸಿದ್ದ ಎಂಎಸ್ ಧೋನಿ ಎರಡೂ ತಂಡಕ್ಕೆ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಆಗಿ ಆಯ್ಕೆಯಾಗಿದ್ದಾರೆ.

ಭಾರತ ಏಕದಿನ ತಂಡ: ವಿರಾಟ್ ಕೊಹ್ಲಿ(ನಾಯಕ), ಎಂಎಸ್ ಧೋನಿ, ಕೆಎಲ್ ರಾಹುಲ್, ಶಿಖರ್ ಧವನ್, ಮನೀಷ್ ಪಾಂಡೆ, ಕೇದಾರ್ ಜಾಧವ್, ಯುವರಾಜ್ ಸಿಂಗ್, ಅಜಿಂಕ್ಯ ರಹಾನೆ, ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ರವೀಂದ್ರ ಜಡೇಜ, ಅಮಿತ್ ಮಿಶ್ರಾ, ಭುವನೇಶ್ವರ ಕುಮಾರ್, ಉಮೇಶ್ ಯಾದವ್.

ಟ್ವೆಂಟಿ-20 ತಂಡ: ವಿರಾಟ್ ಕೊಹ್ಲಿ(ನಾಯಕ), ಎಂಎಸ್ ಧೊನಿ(ವಿಕೆಟ್‌ಕೀಪರ್), ಮನೀಷ್ ಪಾಂಡೆ, ಮನ್‌ದೀಪ್ ಸಿಂಗ್, ಕೆಎಲ್ ರಾಹುಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ರವೀಂದ್ರ ಜಡೇಜ, ಯುಝ್ವೆಂದ್ರ ಚಾಹಲ್, ಜಸ್‌ಪ್ರಿತ್ ಬುಮ್ರಾ, ಭುವನೇಶ್ವರ ಕುಮಾರ್, ಆಶೀಷ್ ನೆಹ್ರಾ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News