ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು
Update: 2017-01-06 20:30 IST
ಕಾರವಾರ, ಜ.6: ಶಿರಸಿಯ ಟಿಎಸ್‌ಎಸ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ಬಗ್ಗೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ. ದೇವರಾಜ ತಿಳಿಸಿದ್ದಾರೆ.
ಸಂಸದರು ತಮ್ಮ ತಾಯಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿಲ್ಲ ಎನ್ನುವ ಆಸ್ಪತ್ರೆಯ ಮೂವರ ಮೇಲೆ ಹಲ್ಲೆ ನಡೆಸಿದ್ದರು. ಇದು ಆಸ್ಪತ್ರೆಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ವೈದ್ಯರು ಹಾಗೂ ಸಂಸದರ ನಡುವೆ ರಾಜಿ ಸಂಧಾನವಾದ್ದರಿಂದ ಯಾವುದೇ ದೂರು ದಾಖಲಾಗಿರಲಿಲ್ಲ ಎನ್ನಲಾಗಿದೆ.
ಆದರೆ, ಈ ಬಗ್ಗೆ ಸಾರ್ವಜನಿಕವಾಗಿ ತೀವ್ರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವರು ಹಾಗೂ ಪೊಲೀಸ್ ಮಹಾನಿರ್ದೇಶಕರ ಸೂಚನೆಯಂತೆ ಸೆಕ್ಸನ್ 323, 504, 347ರ ಅಡಿಯಲ್ಲಿ ಮತ್ತು ಕರ್ನಾಟಕ ಮೆಡಿಕಲ್ ಕೇರ್ ಪರ್ಸನಲ್ ಆಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.