×
Ad

ಅಕ್ರಮ ಮರ ಸಾಗಾಟ ಪತ್ತೆ

Update: 2017-01-06 22:38 IST

ಮಂಗಳೂರು, ಜ. 6: ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯೊಂದನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಉಪ ವಲಯ ಅರಣ್ಯ ಅಧಿಕಾರಿಗಳು ಶುಕ್ರವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಸುಳ್ಯ ತಾಲೂಕು ಐವರ್ನಾಡು ಬಾಜಿ ಕೋಡಿ ಗ್ರಾಮದಲ್ಲಿ ಈ ಕಾರ್ಯಾಚರಣೆ ನಡೆದಿದೆ.

  ಐರ್ವರ್ನಾಡು ದಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಅದರಲ್ಲಿ ಮರುವ, ಬನ್ಪು, ಚಿರುವೆ ಜಾತಿಯ ಮರದಿಂದ ಪತ್ತೆಯಾಗಿವೆ. ಒಟ್ಟು 27 ದಿಮ್ಮಿಗಳನ್ನು ಹಾಗೂ ಸಾಗಾಟ ಮಾಡಲಾದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ತಲೆಮರೆಸಿಕೊಂಡಿದ್ದಾನೆ.

  ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ಬಾಸ್ ಎ.ಎಸ್. ಅವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಬಾಲಕೃಷ್ಣ ಎಂ., ತನಿಖೆಯನ್ನು ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News