ನೋಟು ಅಪಮೌಲ್ಯದ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2017-01-07 07:13 GMT

ಮಂಗಳೂರು, ಜ.7: ಮೋದಿ ನೇತೃತ್ವದ ಕೇಂದ್ರ ಸರಕಾರವು ನೋಟು ಅಪವೌಲ್ಯಗೊಳಿಸಿರುವುದನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈಯ ನೇತೃತ್ವದಲ್ಲಿ ಶನಿವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಧರಣಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ವೀಕ್ಷಕ ವಿಷ್ಣುಪ್ರಸಾದ್, ದೇಶದ ಜನತೆ, ಮಿತ್ರಪಕ್ಷಗಳು, ಪ್ರತಿಪಕ್ಷಗಳು ಮತ್ತು ಆರ್‌ಬಿಐ ಗವರ್ನರ್ ಜತೆ ಯಾವುದೇ ಸಮಾಲೋಚನೆ ಮಾಡಿರುವ ನೋಟು ಅಮಾನ್ಯ ಕ್ರಮವು ಅಸಾಂವಿಧಾನಿಕ ಎಂದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಆಹಾರ ಸಚಿವ ಯು.ಟಿ.ಖಾದರ್, ಶಾಸಕರಾದ ಜೆ.ಆರ್.ಲೋಬೊ, ಅಭಯಚಂದ್ರ ಜೈನ್, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಮತ್ತಿತರರು ಮಾತನಾಡಿದರು.
ಮೇಯರ್ ಹರಿನಾಥ್, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಶಾಸಕಿ ಶಕುಂತಳಾ ಶೆಟ್ಟಿ, ರಾಜ್ಯ ಗೇರು ಅಭಿವೃದ್ಧಿ ನಿಗದ ಅಧ್ಯಕ್ಷ ಬಿ.ಎಚ್.ಖಾದರ್, ಡಿಸಿಸಿ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಜಿಪಂ ಸದಸ್ಯೆ ಮಮತಾ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News