ಆಲಡ್ಕ: ಜ.28-29ರಂದು ಸಮಸ್ತ ಆದರ್ಶ ಸಮ್ಮೇಳನ
ವಿಟ್ಲ, ಜ.7: ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖೆಯ 3ನೆ ವಾರ್ಷಿಕೋತ್ಸವದ ಅಂಗವಾಗಿ ಧಾರ್ಮಿಕ ಪ್ರವಚನ, ಸಂಶುಲ್ ಉಲಮಾ ಅನುಸ್ಮರಣೆ ಹಾಗೂ ಸಮಸ್ತ ಆದರ್ಶ ಸಮ್ಮೇಳನವು ಜ.28 ಹಾಗೂ 29ರಂದು ಆಲಡ್ಕ ಮೈದಾನ-ಸಂಶುಲ್ ಉಲಮಾ ನಗರದ ಮರ್‌ಹೂಂ ಶೈಖುನಾ ಸಜಿಪ ಉಸ್ತಾದ್ ವೇದಿಕೆಯಲ್ಲಿ ನಡೆಯಲಿದೆ.
ಸಮಸ್ತ ಕೇಂದ್ರ ಮುಶಾವರ ಸದಸ್ಯ ಶೈಖುನಾ ಹಾಜಿ ಕೆ.ಪಿ.ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜ.28ರಂದು ಖಲೀಲ್ ಹುದವಿ ಕೇರಳ ಮುಖ್ಯ ಭಾಷಣಗೈಯಲಿದ್ದು, ಜ.29ರಂದು ಮಾಡನ್ನೂರ್ ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿಯ ಪ್ರಾಂಶುಪಾಲ ಅಡ್ವೋಕೇಟ್ ಹನೀಫ್ ಹುದವಿ ಹಾಗೂ ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಮುಖ್ಯ ಭಾಷಣ ಮಾಡುವರು.
ಸೈಯದ್ ಎನ್.ಪಿ.ಎಂ. ಫಝಲ್ ಹಾಮಿದ್ ಪೂಕೋಯ ತಂಙಳ್ ಅಲ್-ಬುಖಾರಿ ಕುನ್ನುಂಗೈ, ಸೈಯದ್ ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ, ಮೂಡಿಗೆರೆ ಖಾಝಿ ಖಾಸಿಂ ಮುಸ್ಲಿಯಾರ್, ಸಚಿವರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್ ಬಂಟ್ವಾಳ, ಮುಡಾ ಮಾಜಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್, ಕೆ.ಕೆ.ಶಾಹುಲ್ ಹಮೀದ್, ಬಂಟ್ವಾಳ ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಬುಡಾ ನಿಕಟ ಪೂರ್ವಾಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್, ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಎಸ್.ಎಂ.ರಶೀದ್, ಎಸ್ಕೆಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಇಸ್ಹಾಕ್ ಫೈಝಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭ ಸಂಶುಲ್ ಉಲಮಾ ಅನುಸ್ಮರಣೆ ಹಾಗೂ ಸಮಸ್ತ ಆದರ್ಶ ಸಮ್ಮೇಳನ ನಡೆಯಲಿದೆ ಎಂದು ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇರ್ಶಾದ್ ಗುಡ್ಡೆಅಂಗಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.