ವೀರಾಜಪೇಟೆಯ ಅಂಗನವಾಡಿ ಶಿಕ್ಷಕಿಗೆ ರಾಷ್ಟ್ರ ಪ್ರಶಸ್ತಿ
Update: 2017-01-07 23:01 IST
ವೀರಾಜಪೇಟೆ, ಜ.7: ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ವತಿಯಿಂದ ಉತ್ತಮ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ರಾಷ್ಟ್ರ ಪ್ರಶಸ್ತಿಗೆ ವೀರಾಜಪೇಟೆಯ ಕಲ್ಲುಬಾಣೆ ನಿವಾಸಿ ಅಂಗನವಾಡಿ ಕಾರ್ಯಕರ್ತೆ ಕೆ.ಆರ್. ಗಿರಿಜಾ ಭಾಜನರಾಗಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ವತಿಯಿಂದ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರಿಗೆ ಪ್ರಶಸ್ತಿ ವಿತರಿಸಿದರು.