ಮೂವರು ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲು
Update: 2017-01-07 23:57 IST
ವಾರಾಣಸಿ, ಜ.7: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ರಸ್ತೆ ಬದಿ ಪೋಸ್ಟರ್ ಮತ್ತು ಬ್ಯಾನರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಮೂವರು ಸ್ಥಳೀಯ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶ ರಾಜ್ಯದ ಪಹಾರಿಯಾ ಮತ್ತು ಆಶಾಪುರ್ ವ್ಯಾಪ್ತಿಯ ರಸ್ತೆ ಬದಿ ಪೋಸ್ಟರ್‌ಗಳನ್ನು ಮತ್ತು ಬ್ಯಾನರ್‌ಗಳನ್ನು ಹಚ್ಚಿದ ಆರೋಪದಡಿ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ರಾಜ್‌ಕುಮಾರ್ ಗೌತಮ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ದಿನದ ಹಿಂದೆ ಅಂಟಿಸಿದ್ದ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಪೊಲೀಸರು ತೆರವುಗೊಳಿಸಿದ್ದರೂ, ಮತ್ತೆ ಘಟನೆ ಪುನರಾವರ್ತನೆಯಾದಾಗ ಈ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ. ಉತ್ತರಪ್ರದೇಶದಲ್ಲಿ ಫೆ.11ರಿಂದ ಮಾರ್ಚ್ 8ರವರೆಗೆ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ.