ಸಚಿವ ರಮಾನಾಥ ರೈ ಪ್ರವಾಸ
ಮಂಗಳೂರು, ಜ.7: ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಜ.8 ಹಾಗೂ 9ರಂದು ಜಿಲ್ಲೆಯಲ್ಲಿ ಕೈಗೊಳ್ಳುವ ಪ್ರವಾಸ ಕೈಗೊಳ್ಳಲಿದ್ದಾರೆ.
ರವಿವಾರ 9ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ಕುಡ್ಲ ತುಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ, 10:30ಕ್ಕೆ ಪಂಜಿಕಲ್ಲು ಹಾಲು ಉತ್ಪಾದಕರ ಸಹಕಾರ ಸಂಘ ಬಂಟ್ವಾಳ ಇದರ ನೂತನ ಕಟ್ಟಡ ಉದ್ಘಾಟನಾ ಸಮಾರಂಭ, 12ಕ್ಕೆ ಕೊಣಾಜೆ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥುಕ ಶಾಲಾ ಮೈದಾನದಲ್ಲಿ ದಿ.ಜೀವನ್ ಭಂಡಾರಿ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟದ ಸಭಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜ.9ರಂದು ಬೆಳಗ್ಗೆ 9:45ಕ್ಕೆ ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿ ಇದರ ಶಾಲಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ, 11ಕ್ಕೆ ಕಡೇಶ್ವಾಲ್ಯ ಗ್ರಾಮದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಸಮಾರಂಭ, ಸಂಜೆ 4:30ಕ್ಕೆ ಉಜಿರೆ ಶ್ರೀ ರತ್ನವರ್ಮ ಹೆಗ್ಡೆ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಭಾಗವಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.