ಕರ್ನಾಟಕವು ಏಷ್ಯಾದ ಜ್ಞಾನ ಕೇಂದ್ರವಾಗಿದೆ: ಸಿಎಂ ಸಿದ್ದರಾಮಯ್ಯ
Update: 2017-01-08 11:04 IST
ಬೆಂಗಳೂರು,ಜ.8: ಕರ್ನಾಟಕವು ಏಷ್ಯಾದ ಜ್ಞಾನ ಕೇಂದ್ರವಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಮೂರು ದಿನಗಳ 14ನೇ ಪ್ರವಾಸಿ ಭಾರತೀಯ ದಿನ ಸಮ್ಮೇಳನಲ್ಲಿ ಭಾಗವಹಿಸಿ ಮಾತನಾಡಿದ ಪ್ರವಾಸಿ ಭಾರತೀಯ ದಿವಸ್ ಆಯೋಜಿಸಿರುವುದಕ್ಕೆ ಸಂತಸ ತಂದಿದೆ ವಿದೇಶಿ ಬಂಡವಾಳ ಸೆಳೆಯುವಲ್ಲಿ ಕರ್ನಾಟಕ ಸಫಲವಾಗಿದೆ ಎಂದರು.
ಕಾರ್ಯಕ್ರಮ ಆಯೋಜಿಸಲು ಅವಕಾಶ ನೀಡಿದಕ್ಕೆ ಕೇಂದ್ರ ಸರಕಾರಕ್ಕೆ ಧನ್ಯವಾದ ಸಮರ್ಪಿಸಿದ ಸಿಎಂ ಅವರು ದೇಶದ ಅರ್ಥ ವ್ಯವಸ್ಥೆಗೆ ಕರ್ನಾಟಕ ಕೊಡುಗೆ ನೀಡಿದೆ. ವಿದೇಶಿ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿ 4ನೆ ಸ್ಥಾನದಲ್ಲಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ಅವಕಾಶಗಳಿವೆ ಎಂದು ಸಿದ್ದರಾಮಯ್ಯ ತಿಳಿಸಿದರು.