×
Ad

ಉಡುಪಿ ಶ್ರೀಕೃಷ್ಣ ಮಠದ ಅಡುಗೆ ಕೋಣೆಯಲ್ಲಿ ಬೆಂಕಿ ಆಕಸ್ಮಿಕ

Update: 2017-01-08 21:24 IST

ಉಡುಪಿ, ಜ.8: ಉಡುಪಿ ಶ್ರೀಕೃಷ್ಣ ಮಠದ ಅಡುಗೆ ಕೋಣೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾದ ಘಟನೆ ರವಿವಾರ ರಾತ್ರಿ 8:30ರ ಸುಮಾರಿಗೆ ನಡೆದಿದೆ.

ಮಠದ ಅಡುಗೆ ಕೋಣೆಯ ಚಿಮಿಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಡುಗೆ ಮಾಡುವ ಸಂದರ್ಭದಲ್ಲಿ ಹಾರಿದ ಬೆಂಕಿಯ ಕಿಡಿ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದವರನ್ನು ಕರೆಸಲಾಗಿತ್ತು. ಅಗ್ನಿ ಶಾಮಕ ದಳದ ಸಿಬ್ಬಂದಿ 9 ಗಂಟೆ ಸುಮಾರಿಗೆ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಬೆಂಕಿಯಿಂದ ಯಾವುದೇ ಹಾನಿ, ಅಪಾಯ ಉಂಟಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಅನಾಹುತ ಆಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News