×
Ad

ನ್ಯಾ.ವಿಶ್ವನಾಥ ಶೆಟ್ಟಿ ರಾಜ್ಯದ ನೂತನ ಲೋಕಾಯುಕ್ತ

Update: 2017-01-09 14:40 IST

ಬೆಂಗಳೂರು, ಜ.9: ನ್ಯಾಯಮೂರ್ತಿ ಭಾಸ್ಕರ್ ರಾವ್ ರಾವ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರ ಹೆಸರನ್ನು ಶಿಫಾರಸುಗೊಳಿಸಲು ಇಂದು ರಾಜ್ಯ ಸರಕಾರ ಒಮ್ಮತದ ನಿರ್ಧಾರ ಕೈಗೊಂಡಿದೆ.
ಬೆಂಗಳೂರಿನ ಕುಮಾರ ಕೃಪಾ ಅತಿಥಿಗೃಹದಲ್ಲಿ ಇಂದು ಮಧ್ಯಾಹ್ನ ಮುಖ್ಯ ಮಂತ್ರಿ  ಸಿದ್ದರಾಮಯ್ಯ ನೇತೃತ್ವದ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ರಾಜ್ಯ ಹೈಕೋರ್ಟ್‌‌ನ ನ್ಯಾಯಮೂರ್ತಿ ಆಗಿದ್ದ ನ್ಯಾ.ವಿಶ್ವನಾಥ ಶೆಟ್ಟಿ  ಅವರನ್ನು ಲೋಕಾಯುಕ್ತ ಹುದ್ದೆಗೆ ನೇಮಕಗೊಳಿಸುವ ಬಗ್ಗೆ ತೀರ್ಮಾನಿಸಲಾಯಿತು.

ನ್ಯಾಯಮೂರ್ತಿಗಳಾದ ಎನ್.ಕೆ.ಪಾಟೀಲ್, ನ್ಯಾ. ಆನಂದ ಬೈರಾ ರೆಡ್ಡಿ, ನ್ಯಾ.ವಿಶ್ವನಾಥ ಶೆಟ್ಟಿ ಅವರ ಹೆಸರುಗಳು ಸಭೆಯಲ್ಲಿ ಚರ್ಚೆಗೆ ಬಂದಿತ್ತು. ಈ ಪೈಕಿ ವಿಶ್ವನಾಥ ಶೆಟ್ಟಿ ಅವರದ್ದು ಒಮ್ಮತದ ಆಯ್ಕೆ . ಇದರೊಂದಿಗೆ ಹಲವು ಸಮಯಗಳಿಂದ ಖಾಲಿ ಇರುವ ಲೋಕಾಯುಕ್ತ ಹುದ್ದೆಗೆ ಸರಕಾರ  ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇಮಕ ಮಾಡುವ ನಿರ್ಧಾರ ಕೈಗೊಂಡಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News