×
Ad

ಕೆ.ಎಸ್.ಈಶ್ವರಪ್ಪ ಒಡೆತನದ ಕಂಪೆನಿ ಕಾರ್ಮಿಕರ ಧರಣಿ

Update: 2017-01-10 16:02 IST

ಶಿವಮೊಗ್ಗ, ಜ.10: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಒಡೆತನದ ಉಡುಪು ಫ್ಯಾಷನ್ ಪ್ರೈವೇಟ್ ಲಿ.ನ ಕಾರ್ಮಿಕರು ಸೌಲಭ್ಯಗಳಿಗೆ ಆಗ್ರಹಿಸಿ ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ಕಾರ್ಮಿಕ ವಿಭಾಗದ ನೇತೃತ್ವದಲ್ಲಿ ಧರಣಿ ನಡೆಸಿದರು.

ಕಳೆದ ನಾಲ್ಕು ವರ್ಷಗಳಿಂದ ದುಡಿಯುತ್ತಿರುವ ನೌಕರರಿಗೆ ಸರಿಯಾಗಿ ಇಎಫ್, ಪಿಎಫ್ ನೀಡದೆ ವಂಚಿಸಲಾಗುತ್ತಿದೆ. ಆದ್ದರಿಂದ ಕಾರ್ಮಿಕರ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕು. ಅಲ್ಲದೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಧರಣಿನಿರತರು ಒತ್ತಾಯಿಸಿದರು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬುಲ್ಲಾ ನೇತೃತ್ವದಲ್ಲಿ ಕಾರ್ಮಿಕರು ಧರಣಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News