ಬೈಕ್ ಅಪಘಾತ: ಓರ್ವ ಸವಾರ ಮೃತ್ಯು
Update: 2017-01-10 20:31 IST
ಮಣಿಪಾಲ, ಜ.10: ದೊಡ್ಡಣಗುಡ್ಡೆಯ ಬಾಳಿಗಾ ಆಸ್ಪತ್ರೆಯ ಬಳಿ ಮಿನಿ ಎನ್‌ಎಕ್ಸ್ ಕಾಂಪ್ಲೆಕ್ಸ್ ಎದುರು ಎರಡು ಬೈಕ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಕರಂಬಳ್ಳಿ ಜನತಾ ಕಾಲೋನಿಯ ಮಾಧವ ದೇವಾಡಿಗ ಎಂಬ ವರ ಮಗ ಜಯಂತ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಪೆರಂಪಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್ ಎದುರಿನಿಂದ ಹೋಗುತ್ತಿದ್ದ ಬೈಕ್‌ನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್‌ಗೆ ಢಿಕ್ಕಿ ಹೊಡೆಯಿತು.
ಈ ವೇಳೆ ಮುಂದಿನಿಂದ ಹೋಗುತ್ತಿದ್ದ ಜಯಂತ್ ಅವರ ಬೈಕ್ ಹತೋಟಿ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಜಯಂತ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.