ವಿದ್ಯಾರ್ಥಿನಿಗೆ ಕಿರುಕುಳ: ಮೂವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು, ಜ.10: ನಗರದ ಕಾಲೇಜೊಂದರ ವಿದ್ಯಾರ್ಥಿನಿಗೆ ವಾಟ್ಸ್‌ಆ್ಯಪ್ ಮೂಲಕ ಆಶ್ಲೀಲ ಚಿತ್ರ ರವಾನಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪದ ಮೇಲೆ ಮೂವರ ವಿರುದ್ಧ ಕಾವೂರು ಪೊಲೀಸರು ಮಂಗಳವಾರ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಮೂಡುಶೆಡ್ಡೆಯ ಪುನೀತ್‌ರಾಜ್ ಪೂಜಾರಿ (20) ಕಳೆದ ಅಕ್ಟೋಬರ್‌ನಿಂದ ವಿದ್ಯಾರ್ಥಿನಿಯ ವಾಟ್ಸ್‌ಆ್ಯಪ್‌ಗೆ ಅಶ್ಲೀಲ ಸಂದೇಶಗಳನ್ನು ರವಾನಿಸಿ, ವಿದ್ಯಾರ್ಥಿನಿಯ ಭಾವಚಿತ್ರವನ್ನು ವಿರೂಪಗೊಳಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೆ , ಸಹಕರಿಸದಿದ್ದರೆ ಈ ಫೋಟೊವನ್ನು ಎಲ್ಲರಿಗೂ ರವಾನಿಸಿ ಮಾನ ಹರಾಜು ಹಾಕುವುದಾಗಿ ಬೆದರಿಸಿದ್ದಾನೆ.
ಇದಕ್ಕೆ ಮೂಡುಶೆಡ್ಡೆಯ ಪೃಥ್ವಿ ಮತ್ತು ಮಂಗಳೂರಿನ ವಿಲಾಸ್ ಎಂಬವರೂ ಸಹಕರಿಸಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿನಿ ನೀಡಿದ ದೂರಿನಂತೆ ಕಾವೂರು ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಅಲ್ಲದೆ ಪ್ರಮುಖ ಆರೋಪಿ ಪುನೀತ್‌ರಾಜ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇತರ ಇಬ್ಬರು ಆರೋಪಿಗಳ ಬಂಧನಕ್ಕೆ ಕ್ರಮ ಜರಗಿಸಿದ್ದಾರೆ.