×
Ad

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು

Update: 2017-01-11 00:21 IST

ಉಪ್ಪಿನಂಗಡಿ, ಜ.10: ಲಾರಿ ಢಿಕ್ಕಿ ಹೊಡೆದು ಬೈಕ್ ಸಹಸವಾರ ವಿದ್ಯಾರ್ಥಿಯೋರ್ವ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಶಿರಾಡಿ ಸಮೀಪದ ಕೊಲ್ಯೊಟ್ಟು ಎಂಬಲ್ಲಿ ಮಂಗಳವಾರ ನಡೆದಿದೆ.

ಹಾಸನದ ಬಿಟ್ಟಿಹಳ್ಳಿ ನಿವಾಸಿ ಗಂಗಾಧರ ಶೆಟ್ಟಿ ಎಂಬವರ ಪುತ್ರ ಪವನ್(22) ಮೃತಪಟ್ಟ ಬೈಕ್ ಸಹ ಸವಾರ. ಗಾಯಗೊಂಡವರನ್ನು ಬೈಕ್ ಸವಾರ ಹಾಸನದ ಅರಸೀಕೆರೆ ಭಾಗೇಶ್ ಅವರ ಪುತ್ರ ಪ್ರದೀಪ್(22) ಎಂದು ಗುರುತಿಸಲಾಗಿದೆ. ನೆಯ ವಿವರ: ಪವನ್ ಹಾಗೂ ಪ್ರದೀಪ್ ಹಾಸನದ ಸರಕಾರಿ ಪಾಲಿಟೆಕ್ನಿಕ್‌ನ ವಿದ್ಯಾರ್ಥಿಗಳಾಗಿದ್ದು, ಮಂಗಳವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೈಕ್‌ನಲ್ಲಿ ಆಗಮಿಸಿದ್ದರು. ವಾಪಸ್ ಹಾಸನಕ್ಕೆ ಹಿಂದಿರುಗುತ್ತಿದ್ದ ಸಂದರ್ಭ ಹಾಸನದಿಂದ ಉಪ್ಪಿನಂಗಡಿ ಕಡೆಗೆ ಆಗಮಿಸುತ್ತಿದ್ದ ಟಿಪ್ಪರ್ ಲಾರಿ ಇವರ ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಈ ಸಂದರ್ಭ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಬೈಕ್‌ನ ಹಿಂಬದಿ ಸವಾರ ಪವನ್ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿರುವ ಬೈಕ್ ಸವಾರ ಪ್ರದೀಪ್‌ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವಾದ ಬಳಿಕ ಸ್ಥಳದಿಂದ ಪರಾರಿಯಾದ ಟಿಪ್ಪರ್ ಲಾರಿಯನ್ನು ಪೊಲೀಸರು ನೆಲ್ಯಾಡಿ ಬಳಿ ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News