×
Ad

ಜ.12ರಂದು ನ್ಯಾಷನಲ್ ಟ್ಯುಟೋರಿಯಲ್ ಕಾಲೇಜಿನಲ್ಲಿ ಸಾಧಕರಿಗೆ ಸನ್ಮಾನ

Update: 2017-01-11 21:19 IST

ಮಂಗಳೂರು, ಜ.11: ನ್ಯಾಷನಲ್ ಟ್ಯುಟೋರಿಯಲ್ ಕಾಲೇಜಿನ 21ನೆ ವಾರ್ಷಿಕೋತ್ಸವದ ಪ್ರಯುಕ್ತ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜ.12ರಂದು ನಗರದ ಪುರಭವನದಲ್ಲಿ ನಡೆಯಲಿದೆ.

ಸಚಿವ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಬಿ.ಎ.ಮೊಯ್ದಿನ್ ಬಾವಾ ಮತ್ತು ಬೊಕ್ಕಪಟ್ಣ ಸರಕಾರಿ ಪಪೂ ಕಾಲೇಜಿನ ಪ್ರಾಂಶುಪಾಲ ಡಿ. ಶ್ಯಾಮ ಮೊಯ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬಜ್ಪೆ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶಹನಾ ಪೆಹಲಾವಿ ಮುಖ್ಯ ಭಾಷಣ ಮಾಡಲಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ವಹಿಸಲಿದ್ದಾರೆ.

ಸ್ಟಾರ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮುಹಮ್ಮದ್ ಸಲೀಂ ಮಲಾರ್, ಸುರತ್ಕಲ್ ಅಬಾ ಕಾಲೇಜಿನ ನಿರ್ದೇಶಕ ಮುಹಮ್ಮದ್ ರಫೀಕ್, ನ್ಯಾಷನಲ್ ಟ್ಯುಟೋರಿಯಲ್‌ನ ಹಳೆ ವಿದ್ಯಾರ್ಥಿಗಳಾದ ಡಾ. ಜೀಶನ್ ಹಮೀದ್, ಕೃಷ್ಣ ಕಲ್ಲೋಡಿ ಅವರನ್ನು ಸನ್ಮಾನಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಯು.ಎಚ್. ಖಾಲಿದ್ ಉಜಿರೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News