ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
Update: 2017-01-12 20:27 IST
ಮಂಗಳೂರು, ಜ. 12: ಎಚ್.ಎಫ್.ಎಫ್ ವತಿಯಿಂದ ನಗರದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ 150 ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಸಮವಸ್ತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಚ್.ಎಫ್.ಎಫ್. ಸಂಸ್ಥೆಯ ರಾಷ್ಟ್ರೀಯ ಕಾರ್ಯದರ್ಶಿ ಶರೋನ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬೆಥನಿ ಕಾನ್ವೆಂಟಿನ ಸಹಾಯಕ ಸುಪೀರಿಯರ್ ಹಾಗೂ ಸಹೋದಯ ಬೆಥನಿ ಸೇವಾ ಕೇಂದ್ರದ ಸಂಯೋಜಕಿ ಭಗಿನಿ ಮಿಷಲ್‌ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ರೋಶನಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಸಿಲ್ವಿಯಾ ಗೀತಾ ಡಿಸೋಜಾ ಸ್ವಾಗತಿಸಿದರು. ದೈಹಿಕ ಶಿಕ್ಷಕ ನಂದೀಪ್ ಡಿಸೋಜಾ ವಂದಿಸಿದರು. ಸಹ ಶಿಕ್ಷಕಿ ಮರೀನಾ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.