ಬೈಕ್ ಢಿಕ್ಕಿ: ಸವಾರ ಮೃತ್ಯು
ಮೂಡಿಗೆರೆ, ಜ.12: ಹಸುವೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಮೂಡಿಗೆರೆ ಠಾಣೆ ಸರಹದ್ದಿನ ಕೃಷ್ಣಾಪುರ ಎಂಬಲ್ಲಿ ನಡೆದಿದೆ.
ಮೃತನನ್ನು ಖಲಂದರ್ ಶಫಿ(19) ಎಂದು ಗುರುತಿಸಲಾಗಿದೆ. ಜ.10ರಂದು ರಾತ್ರಿ ಸಮಯದಲ್ಲಿ ಮೂಡಿಗೆರೆ ಹ್ಯಾಂಡ್‌ಪೋಸ್ಟ್‌ನಿಂದ ಚಿಕನ್ ಖರೀದಿಸಲು ದ್ವಿಚಕ್ರ ವಾಹನದಲ್ಲಿ ಹೋಗಿದ್ದ. ಹಿಂದಿರುಗಿ ಬರುತ್ತಿದ್ದಾಗ ರಸ್ತೆಯಲ್ಲಿ ಅಡ್ಡಲಾಗಿ ಬಂದ ಹಸುವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಮೇಲೆ ಬಿದ್ದು ತಲೆ, ಕೈ, ಕಾಲು ಸಹಿತ ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿತ್ತು.
ತಕ್ಷಣ ಸ್ಥಳೀಯರು ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಖಲಂದರ್ ಶಫಿ ಜ.11ರಂದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.