ಜ.13ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿಂದ ರಾಷ್ಟ್ರೀಯ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
ಮಂಗಳೂರು, ಜ.13 : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ 'ರಾಷ್ಟ್ರೀಯ ವಿದ್ಯಾರ್ಥಿ ವೇತನ' ವಿತರಣಾ ಸಮಾರಂಭವು ದಿನಾಂಕ 15/01/2017 ರಂದು ಮಧ್ಯಾಹ್ನ 2:30ಕ್ಕೆ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಲಿದೆ.
ಆರ್ಥಿಕವಾಗಿ ತೀರಾ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಪ್ರತಿ ವರ್ಷ 'ರಾಷ್ಟ್ರೀಯ ವಿದ್ಯಾರ್ಥಿ ವೇತನ 'ದ ಮೂಲಕ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ಇದರ ಭಾಗವಾಗಿ ಕರಾವಳಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ವಹಿಸಲಿವರು. ಮುಖ್ಯ ಅತಿಥಿಗಳಾಗಿ ಅಲ್ಪಸಂಖ್ಯಾತ ಅಭಿವೃಧಿ ನಿಗಮದ ಅದ್ಯಕ್ಷ ಎಂ.ಎ.ಗಫೂರ್ , ಶಾಸಕ ಜೆ.ಆರ್. ಲೋಬೊ, ಮನಪಾ ಮೇಯರ್ ಎಮ್.ಹರಿನಾಥ್, ಟಿ.ಆರ್.ಎಫ್ ಚೆಯರ್‌ಮೆನ್ ಅಬ್ದುರ್ರವೂಫ್ ಪುತ್ತಿಗೆ, ಕಾಪೋರೇಟರ್ ಅಯಾಝ್ ಅಹ್ಮದ್ ಹಾಗೂ ಪಾಪ್ಯುಲರ್ ಫ್ರಂಟ್ ಜಿಲ್ಲಾದ್ಯಕ್ಷ ಮುಹಮ್ಮದ್ ಹನೀಫ್ ಭಾಗವಹಿಸಲಿದ್ದಾರೆ.