×
Ad

ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

Update: 2017-01-13 17:18 IST

ಚಾಮರಾಜನಗರ, ಜ.13: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಶುಕ್ರವಾರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿಂಶಾ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ಯಲಹಂಕ ಬಿಎಸ್‌ಎಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ದೇವರಾಜು ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ವಿಜಯಪುರದ ಮಹದೇವ್ ಎಂಬಾತನ ಸ್ಥಿತಿ ಚಿಂತಾಜನಕವಾಗಿದ್ದು, ಚಾಮರಾಜನಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಳ್ಳೇಗಾಲದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News