ಜ.17ರಂದು ಉಡುಪಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ
Update: 2017-01-14 16:08 IST
ಉಡುಪಿ, ಜ.14: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟವು ಜ.17ರಂದು ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಬೆಳಗ್ಗೆ 10:30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್‌ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಯಕರ ಸುವರ್ಣ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಉಡುಪಿ ಜೈದೇವ್ ಮೋಟಾರ್ಸ್‌ನ ಸಿಇಒಜಯರಾಮ್ ಸುವರ್ಣ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ವಾರ್ತಾಧಿಕಾರಿ ರೋಹಿಣಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ಕುಮಾರ್ ಶೆಟ್ಟಿ ಭಾಗವಹಿಸಲಿರುವರು.
ಬೆಳಗ್ಗೆ 8:30ಕ್ಕೆ ಆರಂಭಗೊಳ್ಳಲಿರುವ ಕ್ರೀಡಾಕೂಟದಲ್ಲಿ ಓಟ, ಮಡಕೆ ಒಡೆಯುವ ಸ್ಪರ್ಧೆ, ಮೂರುಕಾಲು ಓಟ, ಗೋಣಿಚೀಲ ಓಟ ಹಾಗೂ ಇತರ ಮನೋರಂಜನಾ ಸ್ಪರ್ಧೆಗಳು, ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ ಸ್ಪರ್ಧೆ ಗಳು ಜರಗಲಿವೆ ಎಂದು ಸಂಘದ ಪ್ರಕಟನೆೆ ತಿಳಿಸಿದೆ.