×
Ad

​ಪೊಲೀಸ್ ಮಹಾನಿರೀಕ್ಷಕರಾಗಿ ಡಾ.ಎಂ.ಎ.ಸಲೀಂ ಅಧಿಕಾರ ಸ್ವೀಕಾರ

Update: 2017-01-14 23:04 IST

ದಾವಣಗೆರೆ,ಜ.14: ಇಲ್ಲಿನ ಎಸ್ಪಿ ಕಚೇರಿಯಲ್ಲಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾಗಿ ಡಾ.ಎಂ.ಎ.ಸಲೀಂ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದಿನ ಐಜಿಪಿ ಎಂ.ನಂಜುಂಡ ಸ್ವಾಮಿ ಅವರು ಡಾ.ಎಂ.ಎ.ಸಲೀಂ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ನೂತನ ಐಜಿಪಿ ಸಲೀಂ ಅವರು ಈ ಹಿಂದೆ ಬೆಂಗಳೂರು ವಲಯದ ಭ್ರಷ್ಟಾಚಾರ ನಿಗ್ರಹ ದಳದ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ಐಜಿಪಿಯಾಗಿದ್ದ ಡಾ.ನಂಜುಂಡ ಸ್ವಾಮಿ ಅವರು, ಬೆಂಗಳೂರು ನಗರದ ಐಜಿಪಿ ಮತ್ತು ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿ ವರ್ಗಾವಣೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ಪಿ ಭೀಮಾಶಂಕರ ಗುಳೇದ ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News