ಅತ್ತೂರು ಚರ್ಚ್‌ನ ನೊವೆನಾ ಕಾರ್ಯಕ್ರಮಕ್ಕೆ ಚಾಲನೆ
ಕಾರ್ಕಳ, ಜ.15: ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಒಂಬತ್ತು ದಿನಗಳ ನೊವೆನಾ ಕಾರ್ಯ ಕ್ರಮಕ್ಕೆ ರವಿವಾರ ಚಾಲನೆ ನೀಡಲಾಯಿತು.
ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಮಾಜಿ ಶಾಸಕ ಗೋಪಾಲ ಭಂಡಾರಿ ನೊವೆನಾ ಕಾರ್ಯಕ್ರಮವ್ನು ಉದ್ಘಾಟಿಸಿದರು.
ಬಾಸಿಲಿಕಾದ ರೆಕ್ಟರ್ ವಂ.ಜೋರ್ಜ್ ಡಿಸೋಜ, ಸಹಾಯಕ ಧರ್ಮ ಗುರು ವಂ.ವಿಜಯ್ ಡಿಸೋಜ, ಉಡುಪಿ ಧರ್ಮಪ್ರಾಂತ್ಯದ ಆಧ್ಯಾತ್ಮಿಕ ಆಯೋಗದ ನಿರ್ದೇಶಕ ವಂ.ಸ್ಟೀಫನ್ ಲೂವಿಸ್, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ರಿಚ್ಚಾರ್ಡ್ ಪಿಂಟೊ, ಕಾರ್ಯದರ್ಶಿ ಸಂತೋಶ್ ಡಿಸಿಲ್ವಾ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಜಾರ್ಜ್ ಕ್ಯಾಸ್ತಲಿನೊ ಉಪಸ್ಥಿತರಿದ್ದರು.
ಪುಣ್ಯಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಜ.22ರಿಂದ ಆರಂಭ ಗೊಂಡು 26ರ ತನಕ ನಡೆಯಲಿದೆ. ಜ.22ರಂದು ಬೆಳಿಗ್ಗೆ 7.30ಕ್ಕೆ ಪವಿತ್ರ ಬಲಿಪೂಜೆಯೊಂದಿಗೆ ಜಾತ್ರಾ ಮಹೊತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಗು ವುದು. ಸೋಮವಾರ ವ್ಯಾಧಿಸ್ಟರಿಗಾಗಿ ವಿಶೇಷ ಬಲಿಪೂಜೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಸುಮಾರು 43 ಬಲಿಪೂಜೆಗಳು ಕನ್ನಡ, ಇಂಗ್ಲೀಷ್, ಮಲಯಾಳ, ಹಾಗೂ ಕೊಂಕಣಿ ಭಾಷೆಯಲ್ಲಿ ಜರುಗಲಿದೆ.